ಅನಂತನಾಗ್‌ನಲ್ಲಿ ಮುಂದುವರೆದ ಎನ್​ಕೌಂಟರ್: ಓರ್ವ ಭಯೋತ್ಪಾದಕನ ಹತ್ಯೆ

ಜಮ್ಮುಕಾಶ್ಮೀರ: ಅನಂತನಾಗ್‌ನ ತಂಗ್‌ಪಾವಾ ಪ್ರದೇಶದಲ್ಲಿ ಭಾನುವಾರ ಸಂಜೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಎನ್​ಕೌಂಟರ್ ಮಾಡಲಾಗಿದೆ. ಉಗ್ರರು ಅಡಗಿರುವ ಪ್ರದೇಶವನ್ನು ಸುತ್ತುವರೆದ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಓರ್ವ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.