ಕೆಎಸ್​​ಆರ್​ಟಿಸಿ ಬಸ್ ಟೈರ್​ ಸ್ಫೋಟ: ಬಸ್ ಚಾಲಕ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಕೆಎಸ್​​ಆರ್​ಟಿಸಿ ಬಸ್ ಟೈರ್​ ಸ್ಫೋಟಗೊಂಡ ಪರಿಣಾಮ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ಸಂಭವಿಸಿದೆ.

ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಟೈರ್ ಸ್ಫೋಟಗೊಂಡು ಪಲ್ಟಿಯಾಗಿದ್ದು, ಚಾಲಕ ಬಸ್​ನಲ್ಲೇ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಘಟನೆಯಲ್ಲಿ ಗಾಯಾಗೊಂಡ ನಾಲ್ವರು ಪ್ರಯಾಣಿಕರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.