ನವದೆಹಲಿ: ಹೊಸ ಸಿಜೆಐ ಆಗಿ ನ್ಯಾಯ ಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಮಂಗಳವಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು. ಯು. ಲಲಿತ್ ಅವರು ಹೆಸರಿಸಿದ್ದಾರೆ. ನ. 9 ರಂದು 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಸಿಜೆಐ ಲಲಿತ್ ಅವರು ಆಗಸ್ಟ್ 27, 2022 ರಂದು 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ನ. 8 ರಂದು ನಿವೃತ್ತರಾಗುತ್ತಿದ್ದಾರೆ. ನ್ಯಾಯಮೂರ್ತಿ ಡಿ. ವೈ ಚಂದ್ರಚೂಡ್ ಅವರ ಅಧಿಕಾರಾವಧಿ 2 ವರ್ಷ 1 ದಿನವಾಗಿರುತ್ತದೆ. ಅವರು ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ.