ಕಾರವಾರ: ಕಾರ್ಮಿಕರ ವಸತಿಗಳಿರುವ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟಗೊಂಡು, ಐದಕ್ಕೂ ಅಧಿಕ ಶೆಡ್ಡುಗಳು ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಮುದಗಾ ಲೇಬರ್ ಕಾಲೋನಿಯಲ್ಲಿ ನಡೆದಿದೆ. ಹೊರ ರಾಜ್ಯದ ಕಾರ್ಮಿರಿದ್ದ ಕಾಲೋನಿಯಲ್ಲಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಾಷತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ಕುರಿತು ಕಾರವಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.