ಆರ್.ಎಸ್.ಎಸ್ ಕಾರ್ಯಕರ್ತರ ಮೇಲೆ ಹಲ್ಲೆ: 10 ಮಂದಿ ಆರೋಪಿಗಳ ಬಂಧನ

ಹಾವೇರಿ: ರಟ್ಟೀಹಳ್ಳಿ ಪಟ್ಟಣದಲ್ಲಿ ನಿನ್ನೆ ರಾತ್ರಿ ಆರ್.ಎಸ್.ಎಸ್ ಕಾರ್ಯಕರ್ತರು ಆರ್ ಎಸ್ಎಸ್ ಪಥಸಂಚಲನ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಓರ್ವ ಆರ್.ಎಸ್.ಎಸ್ ಕಾರ್ಯಕರ್ತನ ತಲೆಗೆ ಗಾಯವಾಗಿದ್ದು, 3-4 ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪ್ರಕರಣ ಸಂಬಂಧ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂಜಾಗೃತಾ ಕ್ರಮವಾಗಿ ರಟ್ಟೀಹಳ್ಳಿ ಪಟ್ಟಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಹಾವೇರಿ ಎಸ್ ಪಿ ಹನುಮಂತರಾಯ ತಿಳಿಸಿದ್ದಾರೆ.