ನವದೆಹಲಿ: ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಕಂಡುಬರುತ್ತಿದ್ದ ಮಂಕಿಪಾಕ್ಸ್ ಪ್ರಕರಣ ಭಾರತಕ್ಕೂ ಕಾಲಿಟ್ಟಿದೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ. ಯು.ಎ.ಇ ಯಿಂದ ಬಂದ ಪ್ರಯಾಣಿಕರೊಬ್ಬರಿಗೆ ಈ ಸೋಂಕು ಇರುವುದು ಧೃಡಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ನಾಲ್ಕು ದಿನಗಳ ಹಿಂದೆ ಅರಬ್‌ನಿಂದ ಕೇರಳಕ್ಕೆ ಬಂದಿದ್ದ ವ್ಯಕ್ತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿದಾಗ ಮಂಕಿಪಾಕ್ಸ್ ಸೋಂಕು ಇರುವುದು ದೃಢಪಟ್ಟಿದೆ. ಕೂಡಲೇ ಅವರಿಗೆ ಚಿಕಿತ್ಸೆಯನ್ನು ಪ್ರಾರಂಭಿಸಿದ್ದಾರೆ.
ಇದರಿಂದ ಯಾರೂ ಭಯಪಡುವ ಅಗತ್ಯವಿಲ್ಲ. ಸೋಂಕಿತರ ನಿಕಟ ಸಂಪರ್ಕದ ಮೂಲಕ ಮಾತ್ರ ಈ ವೈರಸ್ ವೇಗವಾಗಿ ಹರಡುತ್ತದೆ. ಜ್ವರ, ತಲೆನೋವು, ದೇಹದಲ್ಲಿ ಆಯಾಸ ಮಂಕಿಪಾಕ್ಸ್ ಲಕ್ಷಣಗಳು ಎಂದು ತಜ್ಞರು ತಿಳಿಸಿದ್ದಾರೆ.