ಚಿಕಿತ್ಸೆ ಫಲಿಸದೆ ಸೇನೆಯ ಶ್ವಾನ ‘ಜೂಮ್’ ನಿಧನ

ಜಮ್ಮುಕಾಶ್ಮೀರ: ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್ ಪ್ರದೇಶದಲ್ಲಿ ಅ. 10 ರಂದು ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಭಾರತೀಯ ಸೇನೆಯ ದಾಳಿಯ ಶ್ವಾನ ಜೂಮ್ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದೆ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜೂಮ್ ನಿಧನವಾಗಿದೆ ಎಂದು ಸೇನಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬೆಳಿಗ್ಗೆ 11:45 ರವರೆಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಜೂಮ್‌ ಇದ್ದಕ್ಕಿದ್ದಂತೆ ಉಸಿರುಗಟ್ಟಿ ನೆಲಕ್ಕೆ ಕುಸಿದು ಬಿದ್ದುದಾಗಿ ಸೇನಾಧಿಕಾರಿಗಳು ತಿಳಿಸಿದರು. ಭಯೋತ್ಪಾದಕರಿಂದ ಬಂದ ಎರಡು ಗುಂಡುಗಳು ಜೂಮ್‌ ಗೆ ತಗುಲಿ, ಚಿಕಿತ್ಸೆ ನೀಡಲಾಗುತ್ತಿತ್ತು. ದುರಾದೃಷ್ಟವಶಾತ್‌ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದೆ.