ಬೆಳ್ತಂಗಡಿ ಶಾಸಕರ ಮೇಲೆ ಹಲ್ಲೆಗೆ ಯತ್ನ: ಅದೃಷ್ಟವಶಾತ್ ಪಾರು.!

ದಕ್ಷಿಣಕನ್ನಡ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಮೇಲೆ ದಾಳಿ ಮಾಡಲು ಯತ್ನಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಸುಮಾರು 11.30 ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದಾಗ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಹರೀಶ್ ಪೂಂಜಾ ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದರು. ಶಾಸಕರ ಕಾರು ಆ ಕಾರನ್ನು ಹಿಂಬಾಲಿಸುತ್ತಿತ್ತು. ಶಾಸಕರ ಕಾರನ್ನು ಅವರ ಅಧೀಕೃತ ಚಾಲಕ ಚಲಾಯಿಸುತ್ತಿದ್ದ ಎನ್ನಲಾಗಿದೆ. ಈ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ಬೈದು, ತಲವಾರು ತೋರಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.