ಬೆಂಗಳೂರು: ದೀಪಾವಳಿ ಹಬ್ಬದ ಸಮಯದಲ್ಲಿ ಹಲಾಲ್ ಕಟ್ ಮಾಂಸ ಖರೀದಿಸದಂತೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಯುಗಾದಿ ಮತ್ತು ದಸರಾ ಸಮಯದಲ್ಲಿ ಹಿಂದೂ ಸಂಘಟನೆಗಳು ಹಲಾಲ್ ಕಟ್ ವಿರುದ್ಧ ಕ್ಯಾಂಪೇನ್ ನಡೆಸಿದ್ದವು. ಈಗ ಮತ್ತೆ ಪ್ರಾರಂಭಿಸಿದ್ದು, ಹಲಾಲ್ ಮುಕ್ತ ದೀಪಾವಳಿ ಆಚರಿಸಲು ಕರೆ ಕೊಟ್ಟಿದ್ದಾರೆ.
ಹಬ್ಬಕ್ಕೆ ಬೇಕಾದ ಬಟ್ಟೆ, ಪಟಾಕಿ, ಪೂಜಾ ಸಾಮಾಗ್ರಿಗಳನ್ನು ಹಿಂದೂ ವ್ಯಾಪಾರಿಗಳಿಂದಲೇ ಖರೀದಿ ಮಾಡಿ. ಮುಸ್ಲಿಂ ವ್ಯಾಪಾರಿಗಳ ಬಳಿ ವ್ಯಾಪಾರ ಮಾಡಬೇಡಿ. ಹಲಾಲ್ ಮಾಂಸ, ಉತ್ಪನ್ನಗಳ ಖರೀದಿಯಿಂದ ದೂರವಿರಿ. ಹಲಾಲ್ ಉತ್ಪನ್ನಗಳ ಮಾರಾಟದಿಂದ ಬಂದ ಹಣ ದೇಶದ ಭಯೋತ್ಪಾದನಾ ಚಟುವಟಿಕೆಗೆ ಬಳಕೆಯಾಗುತ್ತಿದೆ. ಹೀಗಾಗಿ ಮುಸ್ಲಿಮರ ಬಳಿ ವ್ಯಾಪಾರ ಮಾಡದಂತೆ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ. ಮುಸ್ಲಿಂ ವ್ಯಾಪಾರಿಗಳಿಗೆ ತಕ್ಕ ಪಾಠ ಕಲಿಸುವ ಸಮಯ ಬಂದಿದೆ. ಹಂತ ಹಂತವಾಗಿ ನಮ್ಮ ಅಭಿಯಾನ ಯಶಸ್ವಿಯಾಗಲಿದೆ ಎಂದು ಮುತಾಲಿಕ್ ಹೇಳಿದ್ದಾರೆ.