ಬೆಂಗಳೂರು: ನ. 10 ರಿಂದ ಕರ್ನಾಟಕದಲ್ಲಿ ವಂದೇ ಭಾರತ್ ರೈಲು ಸಂಚರ ಆರಂಭವಾಗಲಿದ್ದು, ಎಲ್ಲಾ ಶ್ರೇಯಸ್ಸು ಮೋದೀಜಿಗಷ್ಟೇ ಸಲ್ಲಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸ್ವದೇಶಿ ನಿರ್ಮಿತ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ಐದನೇ ರೈಲು ನವೆಂಬರ್ 10 ರಂದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗಗಳಲ್ಲಿ ಸಂಚರಿಸಲಿದೆ.
ಎಲ್ಲಾ ಶ್ರೇಯಸ್ಸು ಸಲಬೇಕಾದದ್ದು ಪ್ರಧಾನಿ ಮೋದೀಜಿಗಷ್ಟೇ ಎಂದು ಬರೆದುಕೊಂಡಿದ್ದಾರೆ. ಇನ್ನೂ ಬೆಂಗಳೂರು ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗುತ್ತಿರುವ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 10 ಕ್ಕೆ ಬೆಂಗಳೂರಿಗೆ ಬರುವ ಸಾಧ್ಯತೆ ಇದ್ದು, ಅವರೇ ಈ ಹೊಸ ರೈಲಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.