ಬೆಂಗಳೂರು: ಕನ್ನಡ ಸಿನೆಮಾ ಕಾಂತಾರ ಎಲ್ಲೆಡೆ ಅಬ್ಬರದಿಂದ ಯಶಸ್ಸಿನತ್ತ ಸಾಗುತ್ತಿದ್ದು, ಚಿತ್ರದ ನಾಯಕ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕಬಡ್ಡಿ ಅಂಗಳದಲ್ಲಿ ಕಾಣಿಸಿಕೊಂಡಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಟೂರ್ನಿಯ ಭಾನುವಾರದ ಪಂದ್ಯಕ್ಕೆ ರಾಷ್ಟ್ರಗೀತೆ ಹಾಡುವ ಮೂಲಕ ಚಾಲನೆಯನ್ನು ನೀಡಿದ್ದಾರೆ.
ಪ್ರತಿದಿನದ ಪ್ರೊ ಕಬಡ್ಡಿ ಪಂದ್ಯಗಳಿಗೆ ರಾಷ್ಟ್ರಗೀತೆ ಹಾಡುವ ಮೂಲಕ ಚಾಲನೆ ದೊರೆಯುತ್ತದೆ. ಭಾನುವಾರದ ಪುಣೇರಿ ಪಲ್ಟನ್ ಹಾಗೂ ಯು ಮುಂಬಾ ನಡುವಿನ ಪಂದ್ಯಕ್ಕೂ ಮುನ್ನ ರಿಷಬ್ ಶೆಟ್ಟಿ ರಾಷ್ಟ್ರಗೀತೆ ಹಾಡಿ ಸೂಪರ್ ಸಂಡೇ ಮ್ಯಾಚ್ ಚಾಲನೆ ನೀಡಿ, ಬೆಂಗಳೂರು ಬುಲ್ಸ್ ತಂಡಕ್ಕೂ ತಮ್ಮ ಶುಭ ಕೋರಿದರು. ಇದೇ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೂಡ ಭಾಗಿಯಾಗಿ ಪಂದ್ಯಗಳ ವೀಕ್ಷಣೆ ಮಾಡಿದ್ದಾರೆ.