ಸಿದ್ದಾಪುರ: ತೋಟಕ್ಕೆ ಹೋಗಿದ್ದ ರೈತನೋರ್ವ ಸಂಕ ದಾಟುವಾಗ ಕಾಲುಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ತಾರಿಸರ ಬಳಿ ನಡೆದಿದೆ. ಪರಮೇಶ್ವರ ಕೃಷ್ಣಪ್ಪ ಹೆಗಡೆ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಗುರುವಾರ ತೋಟಕ್ಕೆ ಹೋಗಿ ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಜಲಚರಗಳು ಮೃತದೇಹ ಕಚ್ಚಿ ತಿಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತೋಟಕ್ಕೆ ಹೋದವರು ವಾಪಸ್ ಬರಲಿಲ್ಲವೆಂದು ಹುಡುಕಲು ಹೋದಾಗ ಕಾಲು ಸಂಕದಿಂದ 200 ಮೀಟರ್ ದೂರದಲ್ಲಿ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಸ್ಥಳಕ್ಕೆ ಸಿಪಿಐ ಕುಮಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.