ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲದ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಈ ಮೂಲಕ 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ 7,897 ಮತಗಳು, ಸಂಸದ ಶಶಿ ತರೂರ್ ಸಾವಿರ ಮತಗಳನ್ನು ಪಡೆದಿದ್ದು, 416 ಮತಗಳು ತಿರಸ್ಕೃತಗೊಂಡಿವೆ. ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಖರ್ಗೆಗೆ ಪೈಪೋಟಿ ಕೊಟ್ಟಿದ್ದ ಶಶಿ ತರೂರ್ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಪುನರುಜ್ಜೀವನ ಆರಂಭವಾಗಿದೆ ಎಂದು ನಾನು ನಂಬುತ್ತೇನೆ ಎಂದು ಶಶಿ ತರೂರ್ ಹೇಳಿದ್ದಾರೆ. ಕರ್ನಾಟಕ ಮೂಲದವರಾದ ಖರ್ಗೆ ಗೆಲುವಿಗೆ ಅವರ ಊರು ಮತ್ತು ದೆಹಲಿಯಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.