ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಭಟ್ಕಳ: ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದಲ್ಲಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕೆ  ಹೊನ್ನೆಮಡಿಯಲ್ಲಿ  ನಡೆದಿದೆ. ಪದ್ಮಯ್ಯ ತಿಮ್ಮಪ್ಪ ನಾಯ್ಕ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಈತ ಕೆಲವು ವರ್ಷಗಳಿಂದ ಅನಾರೋಗ್ಯ ಬಳಲುತ್ತಿದ್ದು, ಇದನ್ನೆ ಮನಸ್ಸಿಗೆ ಹಚ್ಚಿಕೊಂಡಿದ್ದ ಎನ್ನಲಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಮುಂಜಾನೆಯ ಒಳಗೆ ಮನೆಯ ಪಕ್ಕದಲ್ಲಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರದ ಮೇಲಿದ್ದ ಶವವನ್ನು ನೋಡಿ ಕುಟುಂಬದವರು ಕಂಗಾಲಾಗಿದ್ದು, ಮೃತನ ಮಗ ಉಮೇಶ ನಾಯ್ಕ ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.