ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ​ಗೆ ನ. 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ – ಸಿಎಂ ಬೊಮ್ಮಾಯಿ


ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ​ಗೆ ಕರ್ನಾಟಕ ರತ್ನ ಪ್ರಶಸ್ತಿ  ಕೊಡಲು ತೀರ್ಮಾನಿಸಿದ್ದು, ನ. 1 ರಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಕುರಿತಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಭೆ ಮಾಡಿದ್ದು, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಅಪ್ಪು, ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ. ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನ. 1 ರ ನಂತರ ಬೆಂಗಳೂರಿನಲ್ಲಿ 10 ದಿನಗಳ ಅಂತರದಲ್ಲಿ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ‌ ಹೇಳಿದ್ದಾರೆ.