ಬ್ರಿಟನ್ ನಲ್ಲಿ ರಾಜಕೀಯ ಅರಾಜಕತೆ ತೀವ್ರಗೊಳ್ಳುತ್ತಿದ್ದಂತೆ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಂತರ ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳ ನಂತರ ಲಿಜ್ ಟ್ರಸ್ ಯುಕೆಯ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಹಳಿಗೆ ತರುವ ಬದಲು ಮತ್ತಷ್ಟು ಪಾತಳಕ್ಕೆ ತಳ್ಳಿದ ಆರೋಪದ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಅಧ್ಯಕ್ಷ ಬೋರಿಸ್ ಜಾನ್ಸನ್ ಕೂಡ ಇದೇ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದು, ಬಳಿಕ ನಡೆದ ಚುನಾವಣೆಯಲ್ಲಿ ಲಿಜ್ ಟ್ರಸ್ ಆಯ್ಕೆಯಾಗಿದ್ದರು.
ಲಿಜ್ ಟ್ರಸ್ ತಮ್ಮ ಪ್ರತಿಸ್ಪರ್ಧಿ ಭಾರತೀಯ ಮೂಲದ ರಿಷಿ ಸುನಾಕ್ ಅವರನ್ನು ಪರಾಭವಗೊಳಿಸಿದ್ದು, ಇದೀಗ ರಾಜೀನಾಮೆ ನೀಡಿರುವ ಕಾರಣ ರಿಷಿ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.